ಬೆಳಗಾವಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ಮೊದಲ ಬಾರಿಗೆ ಕರ್ನಾಟಕದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಸ್ಥಳದಲ್ಲಿ ಸಿದ್ಧತೆ ಪರಿಶೀಲನೆ ನಡೆಸಿದ ಅವರು ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದಂದು ರೈತರ ಖಾತೆಗೆ ಹಣ ವರ್ಗಾವಣೆ ಮಾಡುತ್ತಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಫೆಬ್ರವರಿ 27ರಂದು ಬೆಳಗಾವಿಗೆ ಆಗಮಿಸಲಿದ್ದು, ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ ಕಿಸಾನ್ ಸಮ್ಮಾನ್ ಯೋಜನೆ ನಿಧಿಯನ್ನು ರಾಜ್ಯದಿಂದ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತಿರುವುದು ವಿಶೇಷವಾಗಿದೆ. ಕಳೆದ ಬಾರಿ ದೆಹಲಿ ಗ್ರಾಮೀಣ ಕ್ಷೇತ್ರದಿಂದ ರೈತರ ಖಾತೆಗೆ 22 ಸಾವಿರ ಕೋಟಿ ರೂ. ವರ್ಗಾವಣೆ ಮಾಡಲಾಗಿತ್ತು. ಇದುವರೆಗೆ 14 ಕೋಟಿ ರೈತರ ಖಾತೆಗೆ 2.70 ಲಕ್ಷ ಕೋಟಿ ರೂ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.