ಮೈಸೂರು: ಹೈಟೆಕ್ ಕೃಷಿಗೆ ಶೇಕಡ 50ರಷ್ಟು ಸಬ್ಸಿಡಿ ನೀಡುವುದಾಗಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮೈಸೂರಿನ ಸುತ್ತೂರು ಕ್ಷೇತ್ರದಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ಏರ್ಪಡಿಸಿದ್ದ ಕೃಷಿ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಜಿಲ್ಲೆಗಳಲ್ಲಿ ಪ್ರಮುಖ ಬೆಳೆಗಳ ಮೌಲ್ಯವರ್ಧನೆಗೆ ಅಗತ್ಯವಾದ ತಂತ್ರಜ್ಞಾನ ಬಳಕೆ ಮತ್ತು ಸಂಸ್ಕರಣ ಘಟಕ ಆರಂಭಿಸಲು ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ರಗತಿಪರ ಕೃಷಿಕರು, ಸ್ತ್ರೀ ಸ್ವಸಹಾಯ ಸಂಘಗಳು ಮತ್ತು ಇತರೆ ಸಂಘ ಸಂಸ್ಥೆಗಳಿಗೆ ಕೃಷಿಯಲ್ಲಿ ತಂತ್ರಜ್ಞಾನ ಬಳಕೆಗೆ, ಮೌಲ್ಯವರ್ಧನೆಗೆ ಅಗತ್ಯವಾದ ಯಂತ್ರಗಳ ಖರೀದಿಸಲು ಹಣ ನೀಡಲಾಗುವುದು ಎಂದು ಹೇಳಿದ್ದಾರೆ.