ಬೆಂಗಳೂರು: ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಪತ್ರ ಬರೆದಿದ್ದಾರೆ.
ಪ್ರಕರಣದ ಆರೋಪಿ ವಿರುದ್ಧ ನಿರ್ಭಯಾ ಕಾಯ್ದೆ ಅಡಿ ಕೇಸ್ ದಾಖಲಿಸಬೇಕು. ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು. ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು. ಪೋಷಕರಿಗೆ ಸರ್ಕಾರ ಪರಿಹಾರ ಘೋಷಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.