alex Certify BIG NEWS: ಪಾಕ್ ಪರ ಘೋಷಣೆ ಪ್ರಕರಣ; NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾಕ್ ಪರ ಘೋಷಣೆ ಪ್ರಕರಣ; NIA ತನಿಖೆಗೆ ಶೋಭಾ ಕರಂದ್ಲಾಜೆ ಆಗ್ರಹ

ಉಡುಪಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಾಕ್ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧದ ಒಳಗೆ ಹೇಗೆ ಬಿಟ್ಟರು? ಎಂದು ಪ್ರಶ್ನಿಸಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ, ಸೈಯ್ಯದ್ ನಾಸೀರ್ ಹುಸೇನ್ ಸಂಪರ್ಕ ಯಾರ ಜೊತೆ ಇದೆ. ಅಲ್ಲಿ ಬಂದಿರುವ ಯುವಕರ ಸಂಪರ್ಕ ಯಾರ ಜೊತೆ ಇದೆ? ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ತಿಳಿಸಿದರು.

ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ದೇಶದಲ್ಲಿ ಗೊಂದಲ ಉಂಟುಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಹೇಳಿದರು.

ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...