ಉಡುಪಿ: ಪಿಎಫ್ಐ ಮತ್ತು ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ನಂತರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ವಿದೇಶಗಳಿಂದ ನಿರಂತರವಾಗಿ ಜೀವ ಬೆದರಿಕೆ ಬರುತ್ತಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಶೋಭಾ ಕರಂದ್ಲಾಜೆ ಅವರು, ಪಿಎಫ್ಐ ಮತ್ತು ಇತರೆ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದ ನಂತರ ನನಗೆ ನಿರಂತರವಾಗಿ ವಿದೇಶಗಳಿಂದ ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಹಾಕಲಾಗುತ್ತಿದೆ. ನಾಲ್ಕು ಸಂಖ್ಯೆಯ ವಿದೇಶಿ ನಂಬರ್ ಗಳಿಂದ ಬೆದರಿಕೆ ಕರೆಗಳು ಬರುತ್ತಿವೆ. ಈ ಬಗ್ಗೆ ಪೊಲೀಸ ಇಲಾಖೆಗೆ ಮಾಹಿತಿ ನೀಡಿದ್ದೇನೆ. ಈ ಹಿಂದೆ ಹಿಂದುತ್ವದ ವಿಚಾರವಾಗಿ ಮಾತನಾಡಿದಾಗ ನನಗೆ ಬೆದರಿಕೆ ಕರೆ ಬಂದಿದ್ದವು. ಇಂತವುಗಳಿಗೆ ನಾನು ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ.