alex Certify SHOCKING : ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ ; 5 ತಿಂಗಳ ಮಗು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಕಿವಿ ಚುಚ್ಚಲು ಅರಿವಳಿಕೆ ನೀಡಿದ ವೈದ್ಯ ; 5 ತಿಂಗಳ ಮಗು ಸಾವು.!

ಚಾಮರಾಜನಗರ : ಕಿವಿ ಚುಚ್ಚುವಾಗ 5 ತಿಂಗಳ ಮಗು ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ನಡೆದಿದೆ.

ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿವಿ ಚುಚ್ಚಲು ಮಗುವಿಗೆ ವೈದ್ಯರು ಅರಿವಳಿಕೆ ನೀಡಿದ್ದರು. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ .

ಹಂಗಳ ಗ್ರಾಮದ ಆನಂದ್, ಮಾನಸ ದಂಪತಿ ಪುತ್ರ ಪ್ರಖ್ಯಾತ್ ಎಂಬ 6 ತಿಂಗಳ ಮಗು ಮೃತಪಟ್ಟಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಪೋಷಕರು ಕಿವಿ ಚುಚ್ಚಲು ತಮ್ಮ ಮಗುವನ್ನು ಬೊಮ್ಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ. ಆಗ ವೈದ್ಯರು ನೋವಾಗಬಾರದೆಂದು ಮಗುವಿನ 2 ಕಿವಿಗಳಿಗೆ ಅರವಳಿಕೆ ನೀಡಿದ್ದಾರೆ, ನಂತರ ಮಗುವಿನ ಬಾಯಲ್ಲಿ ನೊರೆ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಗುಂಡ್ಲುಪೇಟೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಅಲ್ಲಿ ಮಗು ಮೃತಪಟ್ಟಿದೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...