14 ವರ್ಷದ ಬಾಲಕಿಯ ಶವವು ಅಂಗಡಿಯೊಂದರಲ್ಲಿ ಪತ್ತೆಯಾದ ಶಾಕಿಂಗ್ ಘಟನೆಯು ದೆಹಲಿಯ ಹೊರವಲಯದ ನರೇಲಾ ಪ್ರದೇಶದಲ್ಲಿ ನಡೆದಿದೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪ್ರಾಥಮಿಕ ತನಿಖೆಯಲ್ಲಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೇ ಬಾಲಕಿಯ ಪೋಷಕರು ಮಂಗಳವಾರದಂದು ಪುತ್ರಿ ಕಾಣೆಯಾಗಿದ್ದಾಳೆ ಎಂದು ನರೆಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾಗಿ ಹೇಳಿದ್ದಾರೆ.
ಮೃತ ಬಾಲಕಿಯನ್ನು ಗುರುತು ಹಿಡಿಯಲಾಗಿದ್ದು ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.