
ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಬಾಣಾಪುರ ಕಚೇರಿಯ ಹೊರಗೆ ಜಮಾಯಿಸಿದ್ದ ಜನರ ಗುಂಪಿನ ಮೇಲೆ ವಾಹನ ಹರಿದ ಪರಿಣಾಮ ಶಾಸಕರಿಗೂ ಸಹ ತೀವ್ರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬಾಣಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಆರ್ ಆರ್ ಸಾಹು ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಭುವನೇಶ್ವರದ ಏಮ್ಸ್‌ಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 15 ಬಿಜೆಪಿ ಕಾರ್ಯಕರ್ತರು ಮತ್ತು ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.