ಚಿಕ್ಕಮಗಳೂರು: ಪೋಷಕರು ಮಕ್ಕಳ ಮೇಲೆ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೆ. ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆ ಇಂದ್ರಾವತಿ ಎಸ್ಟೇಟ್ ನಲ್ಲಿ ನಡೆದಿದೆ.
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
7 ವರ್ಷದ ಪ್ರಾರ್ಥನಾ ಮೃತ ಬಾಲಕಿ. ಗೀತಾ ಹಾಗೂ ಶೇಷಪ್ಪ ಎಂಬ ದಂಪತಿಯ ಪುತ್ರಿ ಪ್ರಾರ್ಥನಾ ಎಸ್ಟೇಟ್ ನಲ್ಲಿ ಆಟವಾಡುತ್ತಿತ್ತು. ಈ ವೇಳೆ ನೀರಿನ ಟ್ಯಾಂಕ್ ಗೆ ಬಿದ್ದಿದ್ದಾಳೆ. ತಕ್ಷಣ ಬಾಲಕಿಯನ್ನು ಮೇಲಕೆತ್ತಲಾಗಿದೆಯಾದರೂ ಅಷ್ಟರಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.