ಮಂಡ್ಯ: ಮಗಳ ಕೊಳೆತ ಶವದೊಂದಿಗೆ ಮಾನಸಿಕ ಅಸ್ವಸ್ಥ ತಾಯಿ ನಾಲ್ಕು ದಿನ ಕಳೆದ ಘಟನೆ ಮಂಡ್ಯದ ಹಾಲಹಳ್ಳಿಯ ಮನೆಯೊಂದರಲ್ಲಿ ನಡೆದಿದೆ.
ಅನುಮಾನಾಸ್ಪದ ರೀತಿಯಲ್ಲಿ ರೂಪಾ ಮೃತಪಟ್ಟಿದ್ದಾರೆ. ಮದುವೆಯಾಗಿದ್ದ ನಾಗಮ್ಮ 10 ವರ್ಷಗಳ ಹಿಂದೆ ಗಂಡನನ್ನು ತೊರೆದಿದ್ದರು. ನಾಗಮ್ಮನ ಮನೆಯಿಂದ ಕೊಳೆತ ವಾಸನೆ ಬರುತ್ತಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ನೆರೆಹೊರೆಯ ನಿವಾಸಿಗಳು ನೀಡಿದ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.