alex Certify SHOCKING: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಶೋಷಣೆ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ

ಅಪ್ರಾಪ್ತ ಬಾಲಕಿಗೆ ಮದುವೆಯಾಗಿ ನಂಬಿಸಿದ ಯುವಕನೊಬ್ಬ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಇದರ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗೌಳಿಗೌಡ ಗ್ರಾಮದ 19 ವರ್ಷದ ಮಲ್ಲು ಅಪ್ಪ ಪಿಂಗಳೆ ಎಂಬ ಯುವಕ ತನ್ನದೇ ಗ್ರಾಮದ 16 ವರ್ಷದ ಬಾಲಕಿಯೊಂದಿಗೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ಸಂಬಂಧ ಹೊಂದಿದ್ದು, ನಿನ್ನನ್ನೇ ಮದುವೆಯಾಗುವುದಾಗಿ ಆಕೆಯನ್ನು ನಂಬಿಸಿದ್ದಾನೆ.

ಬಾಲಕಿ ಗರ್ಭಿಣಿಯಾದ ವೇಳೆ ಆಕೆಯಿಂದ ದೂರ ಸರಿದಿದ್ದು, ಇತ್ತೀಚೆಗೆ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇದೀಗ ಆರೋಪಿ ವಿರುದ್ಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಿರುವ ಪೊಲೀಸರು ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...