ಹಾವೇರಿ: ಬ್ಯಾಂಕ್ ನಿಂದ ಲೋನ್ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ನಡೆದಿದೆ.
ರಟ್ಟಿಹಳ್ಳಿ ನಿವಾಸಿ ವಸೀಮ್ ಮುಲ್ಲಾ (33) ಬ್ಯಾಂಕ್ ಗೆ ಬೆಂಕಿಯಿಟ್ಟ ಆರೋಪಿ. ಬೆಂಕಿ ಕೆನ್ನಾಲಿಗೆಗೆ ಬ್ಯಾಂಕ್ ನ ಬಹುತೇಕ ಭಾಗ ಸುಟ್ಟು ಕರಕಲಾಗಿದ್ದು, ಕಾಗದ ಪತ್ರಗಳು ಬೆಂಕಿಗಾಹುತಿಯಾಗಿವೆ.
ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಥಳಿಸಿರುವ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ತನಗೆ ಲೋನ್ ನೀಡಲು ನಿರಾಕರಿಸಿದ್ದರು. ಇದರಿಂದ ಬೇಸತ್ತು ಬ್ಯಾಂಕ್ ಗ್ಲಾಸ್ ಗಳನ್ನು ಒಡೆದು ಒಳನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಗಿ ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ.