alex Certify SHOCKING: ಸೈಬರ್ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಂಬರ್ ವನ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸೈಬರ್ ಅಪರಾಧ ಪ್ರಕರಣಗಳಲ್ಲಿ ಬೆಂಗಳೂರು ನಂಬರ್ ವನ್…!

ರಾಜ್ಯ ರಾಜಧಾನಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದೇ ಹೆಸರುವಾಸಿ. ಈ ಕಾರಣಕ್ಕಾಗಿಯೂ ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸಲಾಗುತ್ತದೆ. ಇದರ ಮಧ್ಯೆ ಉದ್ಯಾನ ನಗರಿ ಬೆಂಗಳೂರು ಸೈಬರ್ ಅಪರಾಧ ಪ್ರಕರಣಗಳಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

NCBR ಸಲ್ಲಿಸಿರುವ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದ್ದು, 2021 ರಲ್ಲಿ ಬೆಂಗಳೂರಿನಲ್ಲಿ 6523 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. ಈ ಮೂಲಕ ಬೆಂಗಳೂರು ಈ ವಿಚಾರದಲ್ಲಿ ಪ್ರಥಮ ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿ ಹೈದರಾಬಾದ್ ನಗರವಿದ್ದು ಇಲ್ಲಿ ಒಟ್ಟು 3303 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಮೂರನೇ ಸ್ಥಾನದಲ್ಲಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ಇದ್ದು, ಇಲ್ಲಿ 2883 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...