ಪುಣೆಯ ಶಾಲೆಯ ಆವರಣದಲ್ಲಿ 10ನೇ ತರಗತಿಯ ಬಾಲಕಿಯೊಬ್ಬಳಿಗೆ 21 ವರ್ಷದ ಯುವಕ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುಣೆಯ ವಡ್ಗಾಂವ್ ಶೇರಿ ಪ್ರದೇಶದ ಶಾಲಾ ಆವರಣದಲ್ಲಿ ಈ ಘಟನೆ ನಡೆದಿದೆ. ಬಾಲಕಿಗೆ ಚಾಕುವಿನಿಂದ ಇರಿದ ಬಳಿಕ ಆರೋಪಿ ವಿಷ ಸೇವಿಸಿದ್ದು, ಇಬ್ಬರನ್ನೂ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರೋಹಿದಾಸ್ ಪವಾರ್ ಹೇಳಿದ್ದು, ಘಟನೆಯ ಉದ್ದೇಶ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಶಿಕ್ಷಕರು ಮತ್ತು ಇತರರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವ್ಯಕ್ತಿಯನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಪವಾರ್ ಹೇಳಿದರು.