ಇತ್ತೀಚೆಗಂತೂ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ತರಗತಿಯಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು 14 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ರಾಣಿಪೇಟ್ ಜಿಲ್ಲೆಯ ಸನ್ಬೀಮ್ ಖಾಸಗಿ ಶಾಲೆಯ 14 ವರ್ಷದ ವಿದ್ಯಾರ್ಥಿನಿ ಇಶಾ ಅದ್ವಿತಾ ತನ್ನ ತರಗತಿಯಲ್ಲಿ ಕುಸಿದುಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಕೂಡ ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.
ಪ್ರಾಥಮಿಕ ತನಿಖೆಯಲ್ಲಿ ಹಾರ್ಟ್ ಅಟ್ಯಾಕ್ ಸಾವಿಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ. ಆಕೆಯ ಹಠಾತ್ ಕುಸಿತದ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆಘಾತಕ್ಕೀಡು ಮಾಡಿದೆ. ಕಾವೇರಿಪಕ್ಕಂ ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದು, ಶವವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ.
#TamilNadu: A 14-year-old student, Esha Advitha, from Sunbeam private school in Ranipet district, tragically collapsed in her classroom and was rushed to a private hospital, where she was declared dead.
Preliminary investigations revealed a pre-existing heart condition as the… pic.twitter.com/qOYneA6tpr
— South First (@TheSouthfirst) December 10, 2024