ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ ಮುಂಬೈನಲ್ಲಿ 14 ವರ್ಷದ ಮಲಮಗಳ ಮೇಲೆ 45 ವರ್ಷದ ಹೆಚ್‌ಐವಿ ಪೀಡಿತ ವ್ಯಕ್ತಿ ಅತ್ಯಾಚಾರ ಎಸಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ವಾರ ತನ್ನ 14 ವರ್ಷದ ಮಲಮಗಳ ಮೇಲೆ ಅತ್ಯಾಚಾರವೆಸಗಿದ್ದಕ್ಕಾಗಿ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಅಪ್ರಾಪ್ತರ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಈ ಘಟನೆ ನಡೆದಿದ್ದು, ಬಾಲಕಿ ತನ್ನ ನೆರೆಹೊರೆಯ ಮಹಿಳೆಗೆ ತನ್ನ ಕಷ್ಟವನ್ನು ವಿವರಿಸಿದ್ದಾಳೆ. ಆಕೆಯನ್ನು ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ.
ಕಳೆದ ವಾರ ಈ ಘಟನೆ ನಡೆದಿದ್ದು, ಆರೋಪಿ ಬಾಂಬೆ ಆಸ್ಪತ್ರೆ ಬಳಿಯ ತಮ್ಮ ಗುಡಿಸಲಿನಲ್ಲಿ ಮಲಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಹೆಚ್‌ಐವಿ ಸೋಂಕಿಗೆ ಒಳಗಾಗಿದ್ದಾನೆ ಮತ್ತು ಆತ ಅಪ್ರಾಪ್ತ ವಯಸ್ಕನಿಗೂ ಸೋಂಕು ತಗುಲಿದ್ದಾನೆಯೇ ಎಂದು ಪರಿಶೀಲಿಸಲು ಕ್ರಮಕೈಗೊಳ್ಳಲಾಗಿದೆ.
ಅಪ್ರಾಪ್ತೆ ತಾಯಿ ಇಲ್ಲದ ವೇಳೆ ಈ ಘಟನೆ ನಡೆದಿದೆ. ಆಕೆಯ ತಾಯಿ ಕೂಡ ಹೆಚ್‌ಐವಿ ಪಾಸಿಟಿವ್ ಎಂದು ಹೇಳಲಾಗಿದೆ. ಬಾಲಕಿ ತನ್ನ ನೆರೆ ಮನೆ ಮಹಿಳೆಗೆ ತನಗಾದ ಕಷ್ಟವನ್ನು ಹೇಳಿಕೊಂಡ ನಂತರ ವಿಷಯ ಬೆಳಕಿಗೆ ಬಂದಿದೆ.
ಭಾರತೀಯ ದಂಡ ಸಂಹಿತೆ(IPC) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(POCSO) ಕಾಯಿದೆ, 2012 ರ ಅಡಿಯಲ್ಲಿ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆಜಾದ್ ಮೈದಾನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಅದೇ ರಾತ್ರಿಯೇ ತಂಡವನ್ನು ಕಳುಹಿಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಘಟನೆಯ ಬಗ್ಗೆ ಯಾರಿಗೂ ಹೇಳದಂತೆ ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದ ಎನ್ನುವುದು ಗೊತ್ತಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ತಜ್ಞರ ತಂಡ ಬಾಲಕಿಗೆ ಸಲಹೆ ನೀಡಲಿದೆ. ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.