ಬೆಳಗಾವಿ : 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ದೇಶಪಾಂಡೆ ಫ್ಲ್ಯಾಟ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಭಜಂತ್ರಿ (14) ಎಂದು ಗುರುತಿಸಲಾಗಿದೆ. ಹಬ್ಬಕ್ಕೆ ರಜೆ ಇದೆ ಓದಿಕೋ ಎಂದು ಎಂದು ಹೇಳಿದ್ದಕ್ಕೆ ತಾಯಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಸಂಬಂಧ ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಕ್ಷುಲ್ಲಕ ಕಾರಣಕ್ಕೆ ಚಿಕ್ಕ ಚಿಕ್ಕ ಮಕ್ಕಳು ಆತ್ಮಹತ್ಯೆಗೆ ಶರಣಾಗುತ್ತಿರುವುದು ಬಹಳ ಆತಂಕಕ್ಕೆ ಕಾರಣವಾಗಿದೆ.