ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಅತ್ತೆಯನ್ನು ಕೊಲ್ಲಲು ಸೊಸೆಯೇ ವೈದ್ಯರ ಬಳಿ ಮಾತ್ರೆ ಕೇಳಿದ್ದಾಳೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅತ್ತೆ-ಸೊಸೆ ಜಗಳ ಈಗಂತೂ ಸರ್ವೆ ಸಾಮಾನ್ಯ ಆಗಿದೆ. ಅತ್ತೆ ಜಗಳ ಮಾಡುತ್ತಾರೆ ಎಂಬ ಕಾರಣಕ್ಕೆ ಸೊಸೆ ಆಕೆಯನ್ನ ಕೊಲ್ಲಲು ನಿರ್ಧರಿಸುವುದು ಆಘಾತಕಾರಿ ವಿಚಾರವಾಗಿದೆ.
ಅತ್ತೆಯನ್ನು ಕೊಲ್ಲಲು ನಿರ್ಧರಿಸಿದ ಸೊಸೆ ವೈದ್ಯರೊಬ್ಬರಿಗೆ ವಾಟ್ಸಾಪ್ ನಲ್ಲಿ ಮೆಸೇಜ್ ಮಾಡಿದ್ದಾರೆ. ನನಗೆ ಅತ್ತೆ ಬಹಳ ಕಿರುಕುಳ, ಹಿಂಸೆನೀಡುತ್ತಾರೆ. ಅವರಿಗೆ ವಯಸ್ಸಾಗಿದ್ದು, ಅವರನ್ನು ಕೊಲ್ಲುವುದು ಹೇಗೆ..? ಈ ಬಗ್ಗೆ ನನಗೆ ಮಾಹಿತಿ ನೀಡಿ ಎಂದು ವೈದ್ಯರಿಗೆ ಸೊಸೆ ಮೆಸೇಜ್ ಮಾಡಿದ್ದಾರೆ. ಮೆಸೇಜ್ ನೋಡಿ ಶಾಕ್ ಆದ ವೈದ್ಯರು ಬುದ್ದಿವಾದ ಹೇಳಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಡಾಕ್ಟರ್ ಬುದ್ದಿವಾದ ಹೇಳುತ್ತಿದ್ದಂತೆ ಸೊಸೆ ಮೆಸೇಜ್ ಡಿಲೀಟ್ ಮಾಡಿದ್ದಾರೆ. ತಕ್ಷಣ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದ ವೈದ್ಯರು ಪೊಲೀಸರಿಗೆ ಕಳುಹಿಸಿ ವಿಚಾರ ತಿಳಿಸಿದ್ದಾರೆ. ಸದ್ಯ, ಮಹಿಳೆಯ ಫೋನ್ ಸ್ವಿಚ್ ಆಫ್ ಆಗಿದ್ದು, ಪೊಲೀಸರು ಮಹಿಳೆಯ ಪತ್ತೆಗೆ ಮುಂದಾಗಿದ್ದಾರೆ.