ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 3 ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.
ಚಾಮರಾಜಪೇಟೆಯ ವಿನಾಯಕನಗರದಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಮಲಗಿದ್ದ 3 ಹಸುವಿನ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ .ಗಾಯಗೊಂಡ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಮೂಕ ಪ್ರಾಣಿಗಳ ಮೇಲೆ ವಿಕೃತಿ ಮೆರೆದ ಕಿಡಿಗೇಡಿಗಳ ಕೃತ್ಯಕ್ಕೆ ಜನರು ಹಿಡಿಶಾಪ ಹಾಕಿದ್ದು, ಆರೋಪಿಗಳನ್ನು ಹಿಡಿದು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.