ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಬುದ್ದಿ ಹೇಳಿದ್ದಕ್ಕೆ ಮಗನೋರ್ವ ತಂದೆಯನ್ನೇ ಹತ್ಯೆಗೈದ ಘಟನೆ ತಿಗರಪಾಳ್ಯದ ಕೆರೆಯ ಮುನೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಮೃತರನ್ನು ಚನ್ನಬಸಪ್ಪ (61) ಎಂದು ಗುರುತಿಸಲಾಗಿದೆ. ಚನ್ನಬಸಪ್ಪ ಮಾಜಿ ಸೈನಿಕರಾಗಿದ್ದು, ಸೆಕ್ಯೂರಿಟಿ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದರು.
ಮಗ ವಿಪರೀತವಾಗಿ ಕುಡಿಯುವ ಚಟಕ್ಕೆ ಬಿದ್ದಿದ್ದನು. ಈ ವಿಚಾರಕ್ಕೆ ಅಪ್ಪ ಮಗನ ನಡುವೆ ಗಲಾಟೆ ನಡೆಯುತ್ತಿತ್ತು.
ಸೋಮವಾರ ಇದೇ ವಿಚಾರಕ್ಕೆ ಗಲಾಟೆ ಶುರುವಾಗಿದ್ದು, ಮಗ ಅಪ್ಪನ ಎದೆಗೆ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಚನ್ನಬಸವಯ್ಯ ಮೃತಪಟ್ಟಿದ್ದಾರೆ. ಆರೋಪಿ ಅಮಿತ್ ನನ್ನು ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.