ಮೈಸೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮೈಸೂರಿನಲ್ಲಿ ನರಬಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ನಂಜನಗೂಡಿನ ಮಲ್ಕುಂಡಿ ಗ್ರಾಮದಲ್ಲಿ ಮಾಟ, ಮಂತ್ರ, ವಾಮಾಚಾರ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಕತ್ತು ಕೊಯ್ದ ಸ್ಥಿತಿಯಲ್ಲಿ 43 ವರ್ಷದ ವ್ಯಕ್ತಿ ಸದಾಶಿವ ಎಂಬುವವರ ದೇಹ ಗ್ರಾಮದಲ್ಲಿ ಪತ್ತೆಯಾಗಿದೆ
ಕತ್ತು ಕೊಯ್ದ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದು, ಇದನ್ನು ನೋಡಿದ ಗ್ರಾಮದ ಜನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ಸ್ಥಳದಲ್ಲಿ ರಕ್ತ, ನಿಂಬೆಹಣ್ಣು, ಎಲೆ ಅಡಿಕೆ ಸೇರಿ ಮಾಟ ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.