ರಾಯಚೂರು : ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 12 ಕ್ಕೇರಿಕೆಯಾಗಿದೆ.
ಮೃತರನ್ನು ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಸರಸ್ವತಿ (24) ಎಂದು ಗುರುತಿಸಲಾಗಿದೆ.
ಜ.2 ರಂದು ರಿಮ್ಸ್ ಆಸ್ಪತ್ರೆಯಲ್ಲಿ ಸರಸ್ವತಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಆದರೆ ಜ.5 ರಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕಳೆದ 4 ತಿಂಗಳಿನಲ್ಲಿ ಒಟ್ಟು 14 ಬಾಣಂತಿಯರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್, ಬೆಳಗಾವಿ ಶಿವಮೊಗ್ಗ, ರಾಯಚೂರು ಸೇರಿದಂತೆ ಹಲವು ಕಡೆ ಬಾಣಂತಿಯರ ಸರಣಿ ಸಾವಿನ ಬಗ್ಗೆ ವರದಿಯಾಗಿದೆ.