alex Certify SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವೃದ್ದ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವೃದ್ದ..!

ಚಿಕ್ಕೋಡಿ : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿರುವ ಘಟನೆ ವರದಿಯಾಗಿದ್ದು, 10 ವರ್ಷದ ಬಾಲಕಿ ಮೇಲೆ ವೃದ್ದನೋರ್ವ ಅತ್ಯಾಚಾರ ಎಸಗಿದ್ದಾನೆ.

ದೇಶದೆಲ್ಲೆಡೆ ಅತ್ಯಾಚಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದ್ದರೂ ಕಾಮುಕರ ಅಟ್ಟಹಾಸ ನಿಲುತ್ತಿಲ್ಲ. ನಿಪ್ಪಾಣಿಯಲ್ಲಿ ವೃದ್ದನೋರ್ವ ಚಾಕೊಲೇಟ್ ಕೊಡುತ್ತೀನಿ ಎಂದು 10 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ರೇಪ್ ಮಾಡಿದ್ದಾನೆ.

ಆಸಿಫ್ ಭಾಗವಾನ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...