ಹಾಸನ : ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ನಡೆದಿದ್ದು, ಕಾಮುಕನೋರ್ವ ಚಾಕೊಲೇಟ್ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಹಾಸನದ ಬೇಲೂರಿನಲ್ಲಿ ನಡೆದಿದೆ.
ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೋಷಕರು ಸಂಬಂಧಿಕರ ಮನೆಗೆ ಹೋಗಿದ್ದಾಗ ಕೃಷ್ಣಯ್ಯ ಎಂಬ ಕಾಮುಕ ಬಾಲಕಿಯಿದ್ದ ಮನೆಗೆ ನುಗ್ಗಿ ಚಾಕೊಲೇಟ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ರಾಜ್ಯದಲ್ಲಿ ಚಿಕ್ಕಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿರುವ ಪ್ರಕರಣ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.