alex Certify ಆಸ್ಪತ್ರೆ ಅವ್ಯವಸ್ಥೆ ರೆಕಾರ್ಡ್ ಮಾಡುತ್ತಿದ್ದ ಯುವಕರಿಗೆ ನರ್ಸ್ ಗಳಿಂದ ಹಿಗ್ಗಾಮುಗ್ಗಾ ಥಳಿತ; ಆಘಾತಕಾರಿ ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆ ಅವ್ಯವಸ್ಥೆ ರೆಕಾರ್ಡ್ ಮಾಡುತ್ತಿದ್ದ ಯುವಕರಿಗೆ ನರ್ಸ್ ಗಳಿಂದ ಹಿಗ್ಗಾಮುಗ್ಗಾ ಥಳಿತ; ಆಘಾತಕಾರಿ ವಿಡಿಯೋ ವೈರಲ್

ಆಘಾತಕಾರಿ ಘಟನೆ ಒಂದರಲ್ಲಿ ಆಸ್ಪತ್ರೆಯ ಕಳಪೆ ವ್ಯವಸ್ಥೆಯನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಇಬ್ಬರು ಯುವಕರನ್ನು ನರ್ಸ್ ಗಳು ಅಮಾನುಷವಾಗಿ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಘಟನೆ ಚಾಪ್ರಾದ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾಗಿದ್ದು, ಇಬ್ಬರು ಯುವಕರು ವೈದ್ಯಕೀಯ ಪ್ರಮಾಣ ಪತ್ರ ಪಡೆಯುವ ಸಲುವಾಗಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಅಲ್ಲಿನ ಅವ್ಯವಸ್ಥೆಯನ್ನು ನೋಡಿದ ಅವರು ಇದನ್ನು ಸಂಬಂಧಪಟ್ಟವರ ಗಮನಕ್ಕೆ ತರುವ ಸಲುವಾಗಿ ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಲು ಆರಂಭಿಸಿದ್ದಾರೆ.

ಇದು ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ನರ್ಸ್ ಗಳ ಗಮನಕ್ಕೆ ಬಂದಿದ್ದು, ಯುವಕರನ್ನು ಕೊಠಡಿಯೊಂದಕ್ಕೆ ಕರೆದೊಯ್ದ ಅವರು ವಿಡಿಯೋ ಡಿಲೀಟ್ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಯುವಕರು ನಿರಾಕರಿಸಿದಾಗ ದೊಣ್ಣೆಯಿಂದ ಥಳಿಸಲು ಆರಂಭಿಸಿದ್ದಾರೆ. ತಮ್ಮನ್ನು ಬಿಟ್ಟುಬಿಡುವಂತೆ ಗೋಗರೆದರೂ ಸಹ ಅವರುಗಳು ಕರುಣೆ ತೋರಿಲ್ಲ

ಅಂತಿಮವಾಗಿ ಘಟನೆ ಆಸ್ಪತ್ರೆಯ ಅಧೀಕ್ಷಕರ ಗಮನಕ್ಕೆ ಬಂದಿದ್ದು, ಬಳಿಕವಷ್ಟೇ ಯುವಕರನ್ನು ಬಿಟ್ಟು ಕಳುಹಿಸಲಾಗಿದೆ. ನರ್ಸ್ ಗಳು ಥಳಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಬಿಹಾರದ ಆರೋಗ್ಯ ಇಲಾಖೆಯನ್ನು ಟ್ಯಾಗ್ ಮಾಡಿರುವ ನೆಟ್ಟಿಗರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...