
ನಂತರ ಜನರ ದೂರಿನ ಮೇರೆಗೆ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿರುವ ವಿಡಿಯೋವೊಂದರ ಪ್ರಕಾರ, ವಾಸಿಂ ದೇವಸ್ಥಾನದ ಒಳಗೆ ಹೋಗಿ ಕುಳಿತಿದ್ದಾನೆ. ನಂತರ ತನ್ನ ಖಾಸಗಿ ಅಂಗವನ್ನು ತೋರಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಪ್ರಕಾಶ್ ನಗರದ ವಿಶ್ವೇಶ್ವರ ಮಹಾದೇವ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.
ಮಾಹಿತಿ ಪಡೆದ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯು ನಶೆಯಲ್ಲಿದ್ದ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. “ಆರೋಪಿಯು ಮಾದಕ ವ್ಯಸನಿಯಾಗಿದ್ದಾನೆ. ಆತನನ್ನು ವಾಸಿಂ ಎಂದು ಗುರುತಿಸಲಾಗಿದೆ. ಎನ್ಎಸ್ಎ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ. ಆತನ ಫೋನ್ ಮತ್ತು ಆತನ ಚಟುವಟಿಕೆಗಳ ಹೆಚ್ಚಿನ ತನಿಖೆ ನಡೆಸಲಾಗುವುದು” ಎಂದು ಅವರು ಹೇಳಿದರು.