ಬೆಂಗಳೂರು : ಇಡ್ಲಿ ತಯಾರಿಸಲು ಬಳಸುವ ಪ್ಲಾಸ್ಟಿಕ್ ನಿಂದ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದ ಬೆನ್ನಲ್ಲೇ ಹಸಿರು ಬಟಾಣಿ ಬಗ್ಗೆ ಆಹಾರ ಇಲಾಖೆ ವರದಿ ನೀಡಿದೆ.
ಕರಿದ ಹಸಿರು ಬಟಾಣಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ವರದಿ ನೀಡಿದೆ. ಹಸಿರು ಬಟಾಣಿಗೆ ನಿಷೇಧಿತ ಬಣ್ಣವನ್ನು ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆ ಎಚ್ಚೆತ್ತ ಆಹಾರ ಇಲಾಖೆ ಸ್ಯಾಂಪಲ್ಸ್ ಗಳನ್ನು ಗುಣಮಟ್ಟ ಪರೀಕ್ಷೆಗೆ ಒಳಪಡಿಸಿದ್ದು, 8 ರಿಂದ 10 ಕಡೆ ಕ್ಯಾನ್ಸರ್ ಕಾರಕ ಬಣ್ಣ ಬಳಕೆ ಮಾಡುತ್ತಿರುವುದು ಪತ್ತೆಯಾಗಿದೆ.
ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣ
ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೋಲೆ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.