ತೀರ್ಥಹಳ್ಳಿ : ನೇಣು ಬಿಗಿದ ಸ್ಥಿತಿಯಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಶವ ಪತ್ತೆಯಾದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಬಸವಾನಿ ಸಮೀಪದ ಕಾಡೊಂದರಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 15 ದಿನದಿಂದ ಬಾಲಕಿ ಶಾಲೆಗೆ ಹೋಗಿರಲಿಲ್ಲ, ಆದ್ದರಿಂದ ಪೋಷಕರು ಶಾಲೆಗೆ ಹೋಗುವಂತೆ ಹೇಳಿದ್ದರು.
ಆದರೆ ಬಾಲಕಿ ಮನೆ ಸಮೀಪದ ಪ್ಲಾಂಟೇಶನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.