ಬೆಂಗಳೂರು : ಕುಡಿದ ಮತ್ತಿನಲ್ಲಿ ಚರಂಡಿಗೆ ಬಿದ್ದು ಗಾರೆ ಮೇಸ್ತ್ರಿ ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಹರೀಶ್ (33) ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆತ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.
ಹರೀಶ್ ಚರಂಡಿಗೆ ಬೀಳುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.