ತುಮಕೂರು : ಯುವಜನತೆಯಲ್ಲಿ ಹೃದಯಾಘಾತ ಕಾಣಿಸಿಕೊಳ್ಳುವ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಹೃದಯಾಘಾತದಿಂದ ಕುಸಿದುಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಪಾವಗಡದ ಸರ್ಕಾರಿ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ಮೈಥಿಲಿ(19) ಮೃತಪಟ್ಟವರು. ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಶನಿವಾರ ತರಗತಿ ಮುಗಿಸಿ ಪಟ್ಟಣದ ನಿಲ್ದಾಣಕ್ಕೆ ಬರುವಾಗ ಚಳ್ಳಕೆರೆ ಕ್ರಾಸ್ ಬಳಿ ಏಕಾಏಕಿ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದಾರೆ. ತಕ್ಷಣ ಅವರನ್ನು ಪಾವಗಡದ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಯುವಜನತೆಯಲ್ಲಿ ಹೃದಯಾಘಾತ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.