ಶಿವಮೊಗ್ಗ : ಯುವಜನತೆಯಲ್ಲಿ ‘ಹೃದಯಾಘಾತ’ ಪ್ರಕರಣಗಳು ಹೆಚ್ಚುತ್ತಿದ್ದು, ಕುಸಿದು ಬಿದ್ದು ‘ಪಿಯುಸಿ’ ವಿದ್ಯಾರ್ಥಿನಿ ಮೃತಪಟ್ಟಂತಹ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ವಿದ್ಯಾನಗರದ ಬಳಿ ಇರುವ ಖಾಸಗಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜೊತೆ ಬರುತ್ತಿದ್ದ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಆಕೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಕೂಡ ಮಾರ್ಗಮಧ್ಯೆ ಆಕೆ ಮೃತಪಟ್ಟಿದ್ದಾಳೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಮುಬಷಿರ್ ಬಾನು (17) ಎಂದು ಗುರುತಿಸಲಾಗಿದೆ. ಮುಬಷಿರ್ ಬಾನು ಏಕಾಏಕಿ ಹಿಮ್ಮುಖವಾಗಿ ಬಿದ್ದು ಮೂರ್ಚೆ ತಪ್ಪಿದ್ದಾಳೆ. ಆಕೆ ಓದಿದ ಪ್ರೌಢ ಶಾಲೆಯ ಶಿಕ್ಷಕರು ಕಾಲೇಜಿಗೆ ಬಂದಿದ್ದಾರೆಂದು ಖುಷಿಯಲ್ಲಿ ಮಾತನಾಡಿಸಲು ಪ್ರಾಂಶುಪಾಲರ ಕಚೇರಿಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.