ಮೈಸೂರು : ಪತ್ನಿಗೆ ವಿಡಿಯೋ ಕಾಲ್ ಮಾಡುವ ವೇಳೆ ರೈಲಿಗೆ ಸಿಲುಕಿ ಪತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.
ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯನ್ನು ಮನು ಕುಮಾರ್ (26) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಮನು ಕುಮಾರ್ ಹೆಂಡತಿಗೆ ವಿಡಿಯೋ ಕಾಲ್ ಮಾಡುತ್ತಾ ರೈಲ್ವೇ ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾನೆ.
ಈ ವೇಳೆ ರೈಲಿಗೆ ಸಿಲುಕಿ ಈತ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಮೊಬೈಲ್ ನಲ್ಲಿ ಪತ್ನಿಗೆ ವಿಡಿಯೋ ಕಾಲ್ ಮಾಡ್ತಾ ರೈಲ್ವೇ ಹಳಿ ಕ್ರಾಸಿಂಗ್ ಮಾಡಿದ್ದು, ರೈಲಿಗೆ ಸಿಲುಕಿ ಈತ ಮೃತಪಟ್ಟಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ರೈಲ್ವೇ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.