ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೋರ್ವ ನಡುರಸ್ತೆಯಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಘಟನೆ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಈ ಘಟನೆ ನಡೆದಿದೆ .ಶ್ರೀಗಂಗಾ (29) ಕೊಲೆಯಾದ ಮಹಿಳೆ. ಪತಿ ಮೋಹನ್ ರಾಜು ಕೊಲೆ ಮಾಡಿದ ದುಷ್ಕರ್ಮಿ.
ಮಗುವನ್ನು ಶಾಲೆಗೆ ಬಿಡಲು ತೆರಳುತ್ತಿದ್ದ ಪತ್ನಿ ಮೇಲೆ ದಾಳಿ ನಡೆಸಿದ ಪತಿ ಚಾಕು ಇರಿದು ಎಸ್ಕೇಪ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.