ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ಮಕ್ಕಳ ಬರ್ಬರ ಕೊಲೆಯಾಗಿದೆ. ಹೌದು. ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಮತಾ ಎಂಬ ಮಹಿಳೆ ತನ್ನ ಮಕ್ಕಳಾದ ಶಂಭು (7) ಶಿಯಾ (3) ರನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ. ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
7 ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲ್ಲಲಾಗಿದ್ದು, ತಾಯಿಯೇ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಂದೆಯೇ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.