ಮಂಗಳೂರು : ಮಂಗಳೂರಿನಲ್ಲಿ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೋರ್ವ ಆ್ಯಸಿಡ್ ದಾಳಿ ನಡೆಸಿದ ಘಟನೆ ನಡೆದಿದೆ.
ಕಡಬದ ಸರ್ಕಾರಿ ಕಾಲೇಜು ಬಳಿ ಈ ಘಟನೆ ನಡೆದಿದೆ. ಮಾಸ್ಕ್ , ಟೋಪಿ ಧರಿಸಿ ಬಂದಿದ್ದ ದುಷ್ಕರ್ಮಿಯೋರ್ವ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಿದ್ದಾನೆ. ಪರಿಣಾಮ ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿನಿಯರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ಎರಚಲು ಪ್ರಮುಖ ಕಾರಣವೇನು..? ಎಂಬುದು ತಿಳಿದು ಬಂದಿಲ್ಲ. ಕೇರಳ ಮೂಲಕ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.