ಹುಬ್ಬಳ್ಳಿ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಹೆಂಡತಿಯನ್ನು ಕೊಚ್ಚಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಟಕರ ಓಣಿಯಲ್ಲಿ ನಡೆದಿದೆ.
ಶಾಹಿಸ್ತಾಬಾನು ಬೇಪಾತಿ ಎಂಬ ಮಹಿಳೆಯನ್ನು ಬರ್ಬರವಾಗಿ ಕೊಚ್ಚಿ ಕೊಂದು ಈಕೆಯ ಪತಿ ಮಲೀಕ್ ನೇಣಿಗೆ ಶರಣಾಗಿದ್ದಾನೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನೆ ನಡೆದ ಸ್ಥಳಕ್ಕೆ ಕಸಬಾಪೇಟ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.