ಹುಬ್ಬಳ್ಳಿ: ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ಬೆನ್ನಲ್ಲೇ ಇದೀಗ ಹೈಸ್ಕೂಲು ವಿದ್ಯಾರ್ಥಿಗಳಲ್ಲಿಯೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಶಾಲೆಗಳಲ್ಲಿಯೂ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಹುಬ್ಬಳ್ಳಿಯ ಖಾಸಗಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಯ ಎಲ್ಲಾ ಮಕ್ಕಳಿಗೆ ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗುತ್ತಿದೆ. ಅಲ್ಲದೇ ಶಿಕ್ಷಕರಿಗೂ ಕೋವಿಡ್ ಟೆಸ್ಟ್ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
9ನೇ ತರಗತಿ ವಿದ್ಯಾರ್ಥಿಗೆ ಆತನ ಅಕ್ಕನಿಂದ ಕೋವಿಡ್ ಸೋಂಕು ಹರಡಿದೆ ಎನ್ನಲಾಗಿದೆ. ಅಕ್ಕ ಧಾರವಾಡ ಎಸ್ ಡಿ ಎಂ ಕಾಲೇಜು ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದು, ಆಕೆಯಿಂದಲೇ ತಮ್ಮನಿಗೆ ಸೋಂಕು ಹರಡಿರುವ ಶಂಕೆ ಇದೆ.