ಯಾದಗಿರಿ; ತನ್ನ ತಂಗಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವ ಹೇಯ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಸುರಪುರ ತಾಲೂಕಿನ ನಿವಾಸಿಯಾದ ಯುವತಿ ಮೇಲೆ ಆಕೆಯ ದೊಡ್ಡಪ್ಪನ ಮಗನೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಸೀತಾಫಲ ಹಣ್ಣು ತರಲು ಹೋಗೋಣ ಎಂದು ಕರೆದುಕೊಂಡು ಹೋಗಿದ್ದ ಅಣ್ಣ, ತನ್ನನ್ನು ಅತ್ಯಾಚಾರ ನಡೆಸಿದ್ದಾಗಿ, ಶಹಾಪುರ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾಳೆ.
ಸ್ವಂತ ಸೂರು ಹೊಂದುವ ಕನಸು ಕಾಣುತ್ತಿದ್ದವರಿಗೆ ಬಿಗ್ ಶಾಕ್…! ಮುಗಿಲು ಮುಟ್ಟಿದ ಸಿಮೆಂಟ್ ಬೆಲೆ
ಕೃತ್ಯದ ಬಳಿಕ ಜೀವ ಬೆದರಿಕೆಯನ್ನೂ ಒಡ್ಡಿದ್ದಾಗಿ ಸಂತ್ರಸ್ತೆ ದೂರಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.