alex Certify SHOCKING NEWS: ಅನಾರೋಗ್ಯಕ್ಕೆ ಬಲಿಯಾದ ಪತ್ನಿ; ಮನನೊಂದ ಪತಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಅನಾರೋಗ್ಯಕ್ಕೆ ಬಲಿಯಾದ ಪತ್ನಿ; ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಚಿಕ್ಕೋಡಿ: ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ ಬೆನ್ನಲ್ಲೇ ಮನನೊಂದ ಪತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ನಡೆದಿದೆ.

26 ವರ್ಷದ ಸದಾಶಿವ ರಾಮಪ್ಪ ಕಾಂಬಳೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಸದಾಶಿವ ರಾಮಪ್ಪ ಅವರ ಪತ್ನಿ ರೂಪಾ ತೀವ್ರ ಅನಾರೋಗ್ಯದಿಂದ ಎರಡು ದಿನಗಳ ಹಿಂದೆ ಮೃತಪಟ್ಟಿದ್ದರು. ಪತ್ನಿ ಕಳೆದುಕೊಂಡು ದುಃಖಿತನಾಗಿದ್ದ ಸದಾಶಿವ ರಾಮಪ್ಪ ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಕುಟುಂಬದ ಇತರ ಸದಸ್ಯರು ತಕ್ಷಣ ಬೆಂಕಿ ನಂದಿಸಿ ರಾಮಪ್ಪನನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದರು. ರಾಮಪ್ಪ ದೇಹ ಶೇ.80ರಷ್ಟು ಸುಟ್ಟು ಹೋಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಬೆಳಗಾವಿಯ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...