ಕಾಬೂಲ್: ಅಪ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮಿತಿ ಮೀರಿದ್ದು, ಜನರ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಆತಂಕಕಾರಿಯಾಗಿದೆ. ಪ್ರಾಣ ಉಳಿಸಿಕೊಳ್ಳಲು ಜನರು ಕಾಬೂಲ್ ನಿಂದ ಬೇರೆ ದೇಶಗಳಿಗೆ ವಿಮಾನಗಳಲ್ಲಿ ತೆರಳಲು ಯತ್ನಿಸಿದ್ದಾರೆ.
ಜನರು ದೇಶ ತೊರೆಯುತ್ತಿರುವುದರಿಂದ ಒಂದೆಡೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಇನ್ನೊಂದೆಡೆ ವಿಮಾನ ನಿಲ್ದಾಣದಲ್ಲಿ ಗುಂಡಿನ ದಾಳಿ ನಡೆದಿದೆ. ಜೀವ ಭಯದಲ್ಲಿ ಜನರು ವಿಮಾನಗಳನ್ನು ಹತ್ತುತ್ತಿದ್ದು, ಈ ನಡುವೆ ಹಾರಾಟ ನಡೆಸುತ್ತಿದ್ದ ವಿಮಾನದ ಟೈರ್ ಹಿಡಿದು ಪ್ರಾಣ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಈ ವೇಳೆ ದುರಂತವೊಂದು ಸಂಭವಿಸಿದ್ದು, ವಿಮಾನ ಟೇಕ್ ಆಫ್ ಗುತ್ತಿದ್ದಂತೆ ಇಬ್ಬರು ಕೆಳಗೆ ಜಾರಿ ಬಿದ್ದು ಧಾರುಣವಾಗಿ ಸಾವನ್ನಪ್ಪಿದ್ದಾರೆ.
ತಾಲಿಬಾನಿಗಳಿಗೆ ಅಧಿಕಾರ ಹಸ್ತಾಂತರ ಮಾಡಿರುವ ಅಪ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಓಮನ್ ಗೆ ಪಲಾಯನ ಮಾಡಿದ್ದು, ಇತ್ತ ಅಪ್ಘಾನ್ ಸಂಸತ್ ಭವನವನ್ನು ಶಸ್ತ್ರಸಜ್ಜಿತ ತಾಲಿಬಾನ್ ಉಗ್ರರು ವಶಕ್ಕೆ ಪಡೆದಿದ್ದಾರೆ.