ಬೆಂಗಳೂರು: ಶುಲ್ಕ ಪಾವತಿ ಮಾಡಿಲ್ಲ ಎಂದು ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮನನೊಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಎನ್.ಗ್ರೀಷ್ಮಾ ನಾಯಕ್ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಮೂಲತ: ಕೊರಟಗೆರೆ ತಾಲೂಕಿನ ಹನುಮಂತಪುರ ನಿವಾಸಿಯಾಗಿರುವ ಗ್ರೀಷ್ಮಾ 9ನೇ ತರಗತಿಯಲ್ಲಿ ಶೇ.96ರಷ್ಟು ಅಂಕ ಗಳಿಸಿದ್ದಳು. ಕಳೆದ ವರ್ಷದ ಶಾಲಾ ಶುಲ್ಕ, ವಸತಿ, ಊಟದ ಬಿಲ್ ಬಾಕಿ ಇತ್ತು. ಹೀಗಾಗಿ ಈ ಬಾರಿ ವಿದ್ಯಾರ್ಥಿನಿಗೆ ಶಾಲಾ ಪ್ರವೇಶಕ್ಕೆ ಅವಕಾಶ ನೀಡಿಲ್ಲ.
ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್: ‘ಮಂಕಿಪಾಕ್ಸ್’ ಪ್ರಕರಣ ಪತ್ತೆ
ಶುಲ್ಕ ಪಾವತಿ ಮಾಡಿಲ್ಲ ಎಂದು ಶಿಕ್ಷಣ ಸಂಸ್ಥೆ ಪ್ರತಿಭಾನ್ವಿತ ವಿದ್ಯಾರ್ಥಿನಿ ಎಂಬುದನ್ನೂ ನೋಡದೇ ಪರೀಕ್ಷೆ ಬರೆಯಲು ಅವಕಾಶ ನೀಡಿಲ್ಲ. ಎಸ್.ಎಸ್.ಎಲ್.ಸಿ. ಪರೀಕ್ಷೆ ನೋಂದಾಯಿಸಿಕೊಳ್ಳುವುದು ವಿದ್ಯಾರ್ಥಿನಿಗೆ ಸಾಧ್ಯವಾಗಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಪೋಷಕರು ಮಗಳನ್ನು ರಕ್ಷಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಮಾಧಾನ ಮಾಡಿದ್ದು, ಬರುವ ಆಗಸ್ಟ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದಾರೆ.