ಹಾಸನ: ಹಾಸನ ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ತಂದೆ-ತಾಯಿ ಹಾಗೂ ಮಗ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.
ಸತ್ಯಪ್ರಕಾಶ್(54), ಅನ್ನಪೂರ್ಣ (50) ಹಾಗೂ ಮಗ ಗೌರವ್ (21) ಮೃತರು. ಮೂವರು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೃತದೇಹಗಳನ್ನು ಹಾಸನ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.