alex Certify SHOCKING NEWS: ಇಂಗ್ಲೀಷ್ ಕಷ್ಟವಾಗುತ್ತೆ ಎಂದು ವಿಷ ಕುಡಿದ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಇಂಗ್ಲೀಷ್ ಕಷ್ಟವಾಗುತ್ತೆ ಎಂದು ವಿಷ ಕುಡಿದ ವಿದ್ಯಾರ್ಥಿ

ತುಮಕೂರು: ಇಂಗ್ಲೀಷ್ ಓದಲು ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ವಿದ್ಯಾರ್ಥಿಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಊರ್ಡಿಗೆರೆಯಲ್ಲಿ ನಡೆದಿದೆ.

ಊರ್ಡಿಗೆರೆ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕ. ತನಗೆ ಇಂಗ್ಲೀಷ್ ಓದಲು ಕಷ್ಟವಾಗುತ್ತೆ. ಶಾಲೆಗೆ ಹೋಗಲ್ಲ ಎಂದು ಮನೆಯಲ್ಲಿ ಹಠ ಹಿಡಿದು ಕುಳಿತಿದ್ದ ಬಾಲಕನಿಗೆ ಪೋಷಕರು ಬೈದು ಶಾಲೆಗೆ ಹೋಗುವಂತೆ ತಿಳಿಸಿದ್ದಾರೆ.

ಇದರಿಂದ ಬೇಸತ ವಿದ್ಯಾರ್ಥಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಪೋಷಕರು ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಚಿಕಿತ್ಸೆ ಮುಂದುವರೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...