ಚಾಮರಾಜನಗರ: ಮನೆಯೊಂದರಲ್ಲಿ ಇದ್ದಕ್ಕಿದ್ದಂತೆ ಭಾರಿ ಸ್ಫೋಟ ಸಂಭವಿಸಿದ್ದು, ಸಿಂಗನಲ್ಲೂರು ಗ್ರಾಮಸ್ಥರು ಕಂಗಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲೂಕಿನಲ್ಲಿ ನಡೆದಿದೆ.
ಸಿದ್ದರಾಜು ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಕೂಡ ಹಾನಿಯಾಗದೇ ಇರುವುದು ಮನೆಯಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟಿದ್ದರೆ ಎಂಬ ಅನುಮಾನ ವ್ಯಕ್ತವಾಗಿದೆ.
ಗೆಳತಿ ಜೀವ ಉಳಿಸಿದ ಸಂಚಾರಿ ಪೇದೆಗೆ ಸಚಿನ್ ತೆಂಡೂಲ್ಕರ್ ಧನ್ಯವಾದ
ಬೆಳಿಗ್ಗೆ ಮನೆಯಲ್ಲಿ ಏಕಾಏಕಿ ಸ್ಫೋಟ ಸಂಭವಿಸಿದ್ದು, ಆರಂಭದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿರಬಹುದು ಎನ್ನಲಾಗಿತ್ತು. ಆದರೆ ಸಿಲಿಂಡರ್ ಹಾನಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಳ್ಳೆಗಾಲ ಠಾಣೆ ಪೊಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.