alex Certify SHOCKING NEWS: ಏಕಾಏಕಿ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಏಕಾಏಕಿ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್

ಮಂಡ್ಯ: ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳಲ್ಲಿ ಬೆಂಕಿ ಅವಘಡಗಳು ಹೆಚ್ಚುತ್ತಿದ್ದು, ಗ್ರಾಹಕರಿಗೆ ಹೊಸ ತಲೆನೋವು ಶುರುವಾಗಿದೆ. ಲಕ್ಷಾಂತರ ರೂಪಾಯಿ ಹಣ ಕೊಟ್ಟು ಖರೀದಿಸುವ ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಇಂತದ್ದೇ ಘಟನೆ ಇದೀಗ ಮಂಡ್ಯದಲ್ಲಿ ನಡೆದಿದೆ.

ಎಲೆಕ್ಟ್ರಿಕ್ ಸ್ಕೂಟರ್ ಒಂದು ನಿಲ್ಲಿಸಿದ್ದ ಜಾಗದಲ್ಲಿಯೇ ಹೊತ್ತಿ ಉರಿದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಜಯಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವರು ಎಲೆಕ್ಟ್ರಿಕ್ ಸ್ಕೂಟರ್ ನ್ನು ಕಾಂಪ್ಲೆಕ್ಸ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ ಹೋಗಿದ್ದರು. ಇದ್ದಕ್ಕಿದ್ದಂತೆ ಬೈಕ್ ಹೊತ್ತಿ ಉರಿಯಲು ಆರಂಭಿಸಿದೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...