ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಕುಟುಂಬಗಳನ್ನೇ ಬಲಿ ಪಡೆಯುತ್ತಿದೆ. ಈ ನಡುವೆ ಕೊರೊನಾ ಸೋಂಕಿಗೆ ಭಯಭೀತರಾದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮಹದೇವಪ್ಪ ದಂಪತಿ, ಇಬ್ಬರು ಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾಲ್ವರಿಗೂ ಕೊರೊನಾ ಪಾಸಿಟಿವ್ ಬಂದಿತ್ತು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎನ್ನಲಾಗಿದೆ. ಚಾಮರಾಜನಗರ ಪೂರ್ವಠಾಣಾ ವ್ಯಾಪ್ತಿಯಲ್ಲಿ ಈ ದುರಂತ ನಡೆದಿದೆ.