ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಬಿಎಂಪಿ ಗುತ್ತಿಗೆ ನೌಕರ ಮಹೇಶ್, ಅವರ ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಸಾವಿಗೆ ಶರಣಾದವರಾಗಿದ್ದಾರೆ.
ಮಹೇಶ್ ಅವರಿಗೆ ಕ್ಯಾನ್ಸರ್ ರೋಗ ತಗುಲಿರುವುದು ಪತ್ತೆಯಾದ ಬಳಿಕ ಮುಂದಿನ ಖರ್ಚು ವೆಚ್ಚಗಳನ್ನು ಭರಿಸಲು ಸಾಧ್ಯವಾಗದೆಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.