alex Certify SHOCKING NEWS: ಕರ್ನಾಟಕ ಭವನ ಉದ್ಯೋಗಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕರ್ನಾಟಕ ಭವನ ಉದ್ಯೋಗಿ ಆತ್ಮಹತ್ಯೆಗೆ ಶರಣು

ನವದೆಹಲಿ: ದೆಹಲಿಯ ಕರ್ನಾಟಕ ಭವನದ ಉದ್ಯೋಗಿಯಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸರ್ಕಾರಿ ನಿವಾಸದ ಕೆಲಸಗಾರರ ಕ್ವಾಟರ್ಸ್ ನಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಆತ್ಮಹತ್ಯೆಗೆ ಶರಣಾದ ಉದ್ಯೋಗಿ.

ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ಅಮಿತ್ ಗುತ್ತಿಗೆ ಆಧಾರದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಇದೀಗ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ತನಿಖೆಯಿಂದಷ್ಟೇ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...