alex Certify SHOCKING NEWS: ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಕಳ್ಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಳ್ಳತನಕ್ಕೆಂದು ಬಂದು ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಕಳ್ಳ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಐಷಾರಾಮಿ ಮನೆಗೆ ಕಳ್ಳತನ ಮಾಡಲು ಬಂದ ಕಳ್ಳ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

ಅಸ್ಸಾಂ ಮೂಲದ ದಿಲೀಪ್ ಕುಮಾರ್ (46) ಮೃತ ವ್ಯಕ್ತಿ. ಇಂದಿರಾ ನಗರದ ಮನೆಯ ಮಾಲೀಕರು ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ವಾಪಸ್ ಬಂದ ವೇಳೆ ಮನೆಯಲ್ಲಿ ಯಾರೋ ಇದ್ದಾರೆ ಎಂಬ ಅನುಮಾನ ವ್ಯಕ್ತವಾಗಿತ್ತು. ದೇವರ ಮನೆಯ ಕಿಟಕಿ ತೆಗೆದು ನೋಡಿದಾಗ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ.

ತಕ್ಷಣ ಮನೆ ಮಾಲೀಕರು ಇಂದಿರಾ ನಗರ ಠಾಣೆ ಪೊಲೀಸರಿಗೆ ತಿಳಿಸಿದ್ದಾರೆ. ಮೃತ ದಿಲೀಪ್ ಕುಮಾರ್ ಈ ಹಿಂದೆಯೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಇದೀಗ ಘಟನೆ ಸಂಬಂಧ ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...