alex Certify SHOCKING NEWS: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವ ಜೋಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವ ಜೋಡಿ

ಉಡುಪಿ: ಯುವ ಜೋಡಿಯೊಂದು ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಉಡುಪಿ ಜಿಲ್ಲೆಯ ಮಂದಾರ್ತಿ ಸಮೀಪದ ಹೆಗ್ಗುಂಜೆಯಲ್ಲಿ ಸಂಭವಿಸಿದೆ.

ಮೃತರು ಬೆಂಗಳೂರು ಮೂಲದ ಯಶವಂತ್ (23) ಹಾಗೂ ಜ್ಯೋತಿ (23) ಎಂದು ಗುರುತಿಸಲಾಗಿದೆ. ಇಬ್ಬರೂ ಬೆಂಗಳೂರಿನ ಆರ್.ಟಿ.ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.

ಪರ್ವತ ಸಿಂಹದ ವಿರುದ್ಧ ಹೋರಾಡಿ ಮಾಲೀಕರನ್ನು ರಕ್ಷಿಸಿದ ಶ್ವಾನ

ಕಳೆದ ಮೂರು ದಿನಗಳಿಂದ ಈ ಜೋಡಿ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಆದರೆ ಇದೀಗ ಉಡುಪಿ ಬಳಿ ಹೆಗ್ಗುಂಜೆ ಸಮೀಪ ನಡು ರಸ್ತೆಯಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಾರೊಂದು ಹೊತ್ತಿ ಉರಿಯುತ್ತಿರುವ ರೀತಿಯಲ್ಲಿ ಪತ್ತೆಯಾಗಿದ್ದು, ಸಮೀಪ ಹೋಗಿ ನೋಡಿದರೆ ಯುವ ಜೋಡಿ ಸಾವನ್ನಪ್ಪಿರುವುದು ತಿಳಿದುಬಂದಿದೆ.

ನಿನ್ನೆ ಯುವ ಜೋಡಿ ಮಂಗಳೂರಿನಲ್ಲಿ ಹುಸೇನ್ ಎಂಬುವವರಿಂದ ಕಾರನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಬಾಡಿಗೆ ಪಡೆದ ಕಾರಿಗೆ ಬೆಂಕಿ ಹಚ್ಚಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...